English   ಕನ್ನಡ

ಕನಕಗಿರಿ ಉತ್ಸವ


ಕನಕಗಿರಿ ಉತ್ಸವವು ಹಂಪಿ ಉತ್ಸವದ ಮಾದರಿಯಲ್ಲಿ ಮೊದಲಬಾರಿಗೆ 2010ರಲ್ಲಿ ಶಾಸಕ ಶ್ರೀ ಶಿವರಾಜ ತಂಗಡಗಿಯವರ ವೈಯಕ್ತಿಕ ಆಸಕ್ತಿ ಹಾಗೂ ಬೆಂಬಲದೊಂದಿಗೆ, ಜಿಲ್ಲಾಡಳಿತದ ಜೊತೆಗುಡಿ ಅದ್ದೂರಿಯಾಗಿ ನಡೆಸಲಾಗಿತ್ತು. ತದನಂತರ 2013 ಮತ್ತು 2015 ರಲ್ಲಿ ನಡೆಸಲಾಯಿತು.

ಉತ್ಸವವನ್ನು ಜನೋತ್ಸವವನ್ನಾಗಿಸುವ ನಿಟ್ಟಿನಲ್ಲಿ ಕೃಷಿ ಉತ್ಸವ, ಕ್ರೀಡಾಕೂಟಗಳು, ರಂಗೋಲಿ ಸ್ಪರ್ಧೆ, ವಿಜೃಂಭಣೆಯ ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆ, ವಸ್ತುಪ್ರದರ್ಶನ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿರಿತ್ತಾರೆ.

ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕೈಗೊಳ್ಳಲಾಗುವುದು. ಉತ್ಸವಕ್ಕೆ ಖ್ಯಾತ ನಟ-ನಟಿಯರ ಜೊತೆಗೆ ರಾಷ್ಟ್ರ ಮಟ್ಟದ ಉತ್ತಮ ಕಲಾವಿದರನ್ನು ಕರೆಯಿಸಿ, ಒಳ್ಳಯೆ ಸಾಂಸ್ಕೃತಿಕ ಕಾರ್ಯಕ್ರಮ ನೀಡುವುದರ ಜೊತೆಗೆ ಸ್ಥಳೀಯ ಉತ್ತಮ ಕಲಾವಿದರಿಗೂ ಆದ್ಯತೆ ನೀಡಲಾಗುವುದು. ಉತ್ಸವದ ಅಂಗವಾಗಿ ಕೃಷಿ ಮೇಳ, ತೋಟಗಾರಿಕೆ ಇಲಾಖೆಯಿಂದ ಆಕರ್ಷಕ ಫಲಪುಷ್ಪ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗುವುದು. ಉತ್ಸವದ ಸಮಯದಲ್ಲಿ ಕನಕಗಿರಿಗೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಂದ, ಅಲ್ಲದೆ ಸುತ್ತಮುತ್ತಲ ಗ್ರಾಮಗಳಿಗೆ ವಿಶೇಷ ಬಸ್ ವ್ಯವಸ್ಥೆ ಕೈಗೊಳ್ಳಲಾಗುವುದು.

ಮಾಹಿತಿ: ಗೂಗಲ್